ಬೆಂಗಳೂರು: ನಗರದ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣುಬಿಗಿದುಕೊಂಡು ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳು. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Post a comment
Log in to write reviews