Samayanews.

Samayanews.

2024-12-23 11:49:52

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಗ್​ಬಾಸ್ ಶೋ ರದ್ದುಗೊಳಿಸುವಂತೆ ಕೋರ್ಟ್​ ತುರ್ತು ನೋಟಿಸ್ ಜಾರಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹತ್ತು ಸೀಜನ್‌ಗಳನ್ನು ಯಶಸ್ವಿಯಾಗಿ ಮುಗಿಸಿದ್ದ ಕನ್ನಡ ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 11 ರ ಶೋ ಆರಂಭಿಸುತ್ತಿದ್ದಂತೆ ಒಂದಾದ ಮೇಲೆ ಒಂದು ವಿಘ್ನಗಳು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿ ಇಂದಿಗೆ 19 ದಿನ ಕಳೆದಿದೆ. ಈ ನಡುವೆ ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ಅನೇಕ ಅರೋಪ ಕೇಳಿ ಬಂದಿದೆ.
ಒಂದೆಡೆ ಸ್ಪರ್ಧಿಗಳ ಮಿತಿ ಮೀರಿದ ವರ್ತನೆಯಿಂದ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾದರೆ ಮತ್ತೊಂದೆಡೆ ಬಿಗ್‌ ಬಾಸ್‌ ಸ್ಪರ್ಧಿ ಆಯ್ಕೆ ಮತ್ತು ಆಯೋಜನೆ ವಿಚಾರವಾಗಿ ಕನ್ನಡ ಬಿಗ್‌ ಬಾಸ್‌ ತಂಡಕ್ಕೆ ಪದೇ ಪದೇ ಕಾನೂನಿನ ಸಂಕಷ್ಟ ಎದುರಾಗುತ್ತಿದೆ.  
ಬಿಗ್ ಬಾಸ್’ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಅಂತ ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆ ದೂರು ನೀಡಿದ್ದರು. ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚೆತ್ತುಕೊಂಡು ಈ ಬಾರಿಯ ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ಅಂತ್ಯಗೊಳಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಿಕೊಡಲಾಗಿತು.
ಬಿಗ್ ಬಾಸ್ 11 ನೇ ಸೀಸನ್ ಪ್ರಸಾರವನ್ನು ಖಾಯಂ ಅಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಮಾನ್ಯ ಪ್ರಧಾನ ವ್ಯವಹಾರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಬಿಗ್ ಬಾಸ್ 11 ನೇ ಸೀಸನ್ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದು ನ್ಯಾಯಾಧೀಶರಾದ ಚಾಂದಿನಿ ಜಿ.ಯು ರವರು ವಕೀಲ ಕೆ.ಎಲ್ ಭೋಜರಾಜ್ ರವರ ಅರ್ಜಿ ಕೈಗೆತ್ತಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ. ಬಿಗ್ ಬಾಸ್ 11ನೇ ಸೀಸನ್ ಖಾಯಂ ರದ್ದು ಆಗುತ್ತಾ ಕಾದು ನೋಡಬೇಕಾಗಿದೆ.
 

img
Author

Post a comment

No Reviews