ಕಣ್ಣೀರಿಟ್ಟು ಬೇಡಿಕೊಂಡರೂ ರೇಣುಕಾಸ್ವಾಮಿಗೆ ಹಿಗ್ಗಾಮುಗ್ಗಾ ಥಳಿಸಿದ ದರ್ಶನ್ & ಗ್ಯಾಂಗ್: ಫೋಟೋ ವೈರಲ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದದಲ್ಲಿ ದರ್ಶನ್ & ಗ್ಯಾಂಗ್ ಜೈಲು ಸೇರಿದ್ದಾರೆ ಈಗಾಗಲೇ ದೋಷಾರೋಪ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಕೆ ಮಾಡಲಾಗಿತ್ತು, ಇದರ ಬೆನ್ನಲ್ಲೇ ಇದೀಗ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡುತ್ತಿರುವ ಫೋಟೋಗಳು ಸಮಾಜಿಕ ಜಾಲತಾನದಲ್ಲಿ ಭಾರೀ ವೈರಲ್ ಆಗುತ್ತಿವೆ.
ಪಟ್ಟಣಗೆರೆ ಶೆಡ್ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಲಾರಿ ಮುಂದೆ ಕುಳಿತು ಕಣ್ಣೀರಿಟ್ಟು ನನ್ನನ್ನು ಬಿಟ್ಟುಬಿಡಿ ಎಂದು ಪರಿಪರಿಯಾಗಿ ದರ್ಶನ್ & ಗ್ಯಾಂಗ್ಗೆ ಬೇಡಿಕೊಂಡಿರುವ ಫೋಟೋಗಳು ಇದೀಗ ವೈರಲ್ ಆಗಿದ್ದು, ಇದನ್ನು ಕಂಡ ಪೊಲೀಸರು, ಜನರು ಶಾಕ್ ಆಗಿದ್ದಾರೆ.
ಮತ್ತೊಂದು ಫೋಟೋದಲ್ಲಿ ರೇಣುಕಾಸ್ವಾಮಿ ಬನಿಯನ್ನಲ್ಲಿ ಕೆಳಗೆ ಬಿದ್ದಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ರೇಣುಕಾಸ್ವಾಮಿ ಎದೆ ಮೇಲೆ ಕೈಯಿಟ್ಟು ಮಲಗಿರುವಂತಹ ಫೋಟೋ ಸಹ ಆರೋಪಿ ವಿನಯ್ ಮೊಬೈಲ್ನಿಂದ ರಿಟ್ರೀವ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಫೋನ್ನಿಂದ ಫೋಟೋಗಳನ್ನು ರಿಟ್ರೀವ್ ಮಾಡಿದ್ದು, ಈ ವೇಳೆ ಈ ಫೋಟೋಗಳು ಸಿಕ್ಕಿವೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಪೊಲೀಸರ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ. ಇನ್ನು ಲಾರಿ ಮುಂದೆ ರೇಣುಕಾಸ್ವಾಮಿಗೆ ಥಳಿಸಿ ಹೊಡೆದು ಮಲಗಿಸಿರುವ ಎನ್ನಲಾಗುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿತ್ತಿವೆ.
ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್ನಲ್ಲಿ ಭೀಕರವಾಗಿ ಹತ್ಯೆಗೈದಿರುವ ಬಗ್ಗೆ ಪೊಲೀಸ್ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಜೂನ್8ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಕರೆತಂದಿದ್ದರು ಎನ್ನಲಾಗುತ್ತಿದೆ.
Post a comment
Log in to write reviews