ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಇನ್ನುಳಿದ 7 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿವೆ ಎಂದು ಹೇಳಿದ್ದಾರೆ. ಇದರ ಜೊತೆಗೆ 5,800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2,400 ಬಸ್‌ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾವ ಬಂದ ನಂತರ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Post a comment
Log in to write reviews