ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದೆ. ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದ್ದು, ಸದ್ಯ ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜನರಲ್ಲಿ ಆತಂಕ ಮೂಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಮಗಳೂರು ತಾಲೂಕು ಒಂದರಲ್ಲೇ 250 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.ಬೇಸಿಗೆ ಅವಧಿಯಲ್ಲಿ ಮಳೆ ಇಲ್ಲದೆ ಚರಂಡಿ, ಮೋರಿ-ಕಾಲುವೆಗಳಲ್ಲಿ ನೀರು ನಿಂತು ಸೊಳ್ಳೆಗಳ ಲಾರ್ವ ಪ್ರಮಾಣ ಹೆಚ್ಚಾಗಿತ್ತು. ಹೀಗಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜೊತೆಗೆ ವಾರಕ್ಕೊಮ್ಮೆ ನೀರು ಬರುವುದರಿಂದ ನೀರನ್ನ ಶೇಖರಿಸಿಕೊಂಡು ಮುಚ್ಚದೆ ಇರೋದ್ರಿಂದಲೂ ಡೆಂಗ್ಯೂ ಬರುತ್ತಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಅವಶ್ಯಕತೆ ಇದ್ದರೆ ಮಾತ್ರ ಅಡ್ಮಿಟ್ ಮಾಡಿಕೊಳ್ಳಲಾಗುತ್ತಿದ್ದು, ಉಳಿದವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಸಲಹೆ ನೀಡಲಾಗಿದೆ. ಸೊಳ್ಳೆಗಳಿಂದ ಸೂಕ್ತ ರಕ್ಷಣೆ ಪಡೆಯಲು ಜನರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Post a comment
Log in to write reviews