ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಹಿನ್ನೆಲೆ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿ.ಟಿ ರವಿ ಮಾತನಾಡಿ ‘ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನಲೆ ಸಿ.ಟಿ ರವಿ ಸಿದ್ದರಾಮಯ್ಯರನ್ನ ಟೀಕಿಸಿ ಅಗೌರವ ತೋರಿದ್ದಾರೆ. ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Post a comment
Log in to write reviews