ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆಯ 10 ತಿಂಗಳುಗಳ ಡಿಪ್ಲೊಮಾ ತರಭೇತಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದರು.
ವಿಕಾಸಸೌಧದ ಇಂದು(ಸೋಮವಾರ ಜೂನ್ 10) ನಡೆದ ಮೃಗಾಲಯ ಪ್ರಾಧಿಕಾರದ 156ರ ಸಭೆಯಲ್ಲಿ ಮಾತನಾಡಿದ ಅವರು ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಜೀವ ವಿಜ್ಞಾನ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈ ತರಭೇತಿ ಆರಂಭಿಸಲು ಒಪ್ಪಿಗೆ ನೀಡಿದ್ದಾರೆ.
ಈ ಡಿಪ್ಲೊಮಾ ಪದವಿಯ ಸಾಧಕ ಬಾಧಕ ಚರ್ಚಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸುವ ಜೊತೆಗೆ ಈ ಕೋರ್ಸ್ ಪಡೆದವರಿಗೆ ಮೃಗಾಲಯಗಳಲ್ಲಿ, ಪುನರ್ವಸತಿ ಮುಂತಾದ ಕೇಂದ್ರಗಳಲ್ಲಿ ಉದ್ಯೋಗ ಅವಕಾಶವನ್ನ ಕಲ್ಪಿಸಲಾಗುವುದು ಎಂದು ತಿಳಿಸಿದರು
Post a comment
Log in to write reviews