Samayanews.

Samayanews.

2024-11-15 07:53:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲುಷಿತ ನೀರಿನಿಂದ ಖಾಯಿಲೆಗಳು ಉಂಟಾದರೆ ಅದಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳೇ ನೇರ ಹೊಣೆ: ಸಿ ಎಂ ಸಿದ್ದರಾಮಯ್ಯ.

ಬೆಂಗಳೂರು: ಇಂದು ವಿಧಾನ ಸೌದದಲ್ಲಿ ಅಧಿಕಾರಿಗಳು ಹಾಗೂ ಸಚಿವರ ಸಭೆ ಕರೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು  ಇದುವರೆಗೆ ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿ ಇರುವುದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಹಾಗಾಗಿ ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಅಲ್ಲದೆ ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು, ಎಂದು ಅಧಿಕಾರಿಗಳಿಗೆ ಸೂಚಿಸಿದರು.ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್. ಎಸ್. ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನಂತರ ಕಾಲರ ರೋಗದ ಬಗ್ಗೆ ಅಧಿಕಾರಿಗಳಿಗೆ ಸಿಎಂ ಕ್ಲಾಸ್‌ ತೆಗೆದುಕೊಂಡರು.  ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳೇ ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ.  ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಗೆ ನೀಡಿದರು. ಇನ್ನು ಮುಂದೆ ಕಲುಷಿತ ನೀರಿನಿಂದ ಖಾಯಿಲೆಗಳು ಉಂಟಾದರೆ ಅದಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದರು.

img
Author

Post a comment

No Reviews