ಬೆಂಗಳೂರು: ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್ ಆಗಿದ್ದ ನಿರೂಪಕಿ ದಿವ್ಯಾ ವಸಂತ್‌ನನ್ನು ಹನಿಟ್ರಾಪ್ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ವಾಹಿನಿಯ ನಿರೂಪಕಿಯಾಗಿ ಕೇವಲ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ದಿವ್ಯಾ ವಸಂತ್ ತಮ್ಮ ಐಶಾರಾಮಿ ಜೀವನ ನಡೆಸಬೇಕೆಂಬ ದುರಾಸೆಯಿಂದ ಅನೇಕರಿಗೆ ಹನಿಟ್ರಾಪ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಕಾಣೆಯಾಗಿದ್ದ ದಿವ್ಯಾ ವಸಂತ್‌ನನ್ನು ಜೀವನ್ ಭೀಮಾನಗರ ಠಾಣೆ ಪೊಲೀಸರು ಈಗ ಕೇರಳದಲ್ಲಿ ಈಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಿವ್ಯಾ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕರಿಗೆ ಬೆದರಿಕೆ ಹಾಕಿ ಹಣ ಸುಲಿಗೆಯ ಪ್ರಕರಣ ಇದಾಗಿದ್ದು, ಈ ಕೇಸ್‌ನಲ್ಲಿ ಸಹೋದರನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ್ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯಾ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸುದ್ದಿ ಜಾಡು ಹಿಡಿದು ತನಿಖೆ ಚುರುಕುಗೊಳಿಸಿದ ಜೀವನ್ ಭೀಮಾನಗರ ಪೊಲೀಸರು ದಿವ್ಯಾಳನ್ನು ಕೇರಳದಲ್ಲಿ ಬಂಧಿಸಿ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
Post a comment
Log in to write reviews