ಬೆಂಗಳೂರು: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ಗೆ ಸವಾಲು ಹಾಕಿದ್ದಾರೆ.
ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂದು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವೇಳೆ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರು ಅನ್ನೋದಕ್ಕಿಂತ ಒಂದೇ ಅಭ್ಯರ್ಥಿ. ಅದು ಬಿಜೆಪಿ ಆಗಬಹುದು ಅಥವಾ ಜೆಡಿಎಸ್ ಆಗಬಹುದು. ಕುಮಾರಸ್ವಾಮಿಯವರ ಜೊತೆ ಈಗಾಗಲೇ ಮಾತುಕತೆ ನಡೆಯುತ್ತಿದೆ. ದೆಹಲಿಗೆ ಹೋದಾಗಲೂ ಕೂಡ ಮಾತುಕತೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
Post a comment
Log in to write reviews