ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಸ್ಪರ್ಧೆ : ಕುತೂಹಲ ಕೆರಳಿಸಿದ ಡಿಕೆ ಸುರೇಶ್ ಹೇಳಿಕೆ..!
ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾದ ನಂತರ ಇದೀಗ ಚನ್ನಪಟ್ಟಣ ಉಪಚುನಾವಣೆ ಕುರಿತು ಕಾಂಗ್ರೆಸ್‌ನಲ್ಲಿ ಭಾರೀ ಚರ್ಚೆ ಶುರುವಾಗಿದೆ. ಆರಂಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿರುವ ಡಿಕೆ ಸುರೇಶ್ ಅವರೇ ಇಲ್ಲಿ ಅಭ್ಯರ್ಥಿಯಾಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಚೆನ್ನಪಟ್ಟಣದಿಂದ ಸ್ಪರ್ಧೆ ಮಾಡಲು ಡಿಕೆ ಸುರೇಶ್ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಚೆನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಮಾದ್ಯಮಗಳೊಂದಿಗೆ ಮಾತನಾಡಿರುವ ಡಿಕೆ ಸುರೇಶ್ ಅವರು, ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ ಅಚ್ಚರಿಯ ಅಭ್ಯರ್ಥಿಯೊಬ್ಬರು ಕಣಕ್ಕೆ ಇಳಿಯುತ್ತಾರೆ ಎಂದು ಹೇಳಿದ್ದಾರೆ. ಡಿಕೆ ಸುರೇಶ್ ಅವರ ಈ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದ್ದು, ಆ ಅಚ್ಚರಿ ಅಭ್ಯರ್ಥಿ ಅವರ ಸಹೋದರ ಉಪ ಮುಖ್ಯಮಂತ್ರಿ ಡಿಕೆಶಿ ಎಂಬ ಮಾತುಗಳು ಹರಿದಾಡುತ್ತಿವೆ. ಸಹೋದರ ಡಿಕೆ ಸುರೇಶ್ಗೆ ಯಾವುದಾದರೂ ಅಧಿಕಾರ ಒದಗಿಸಿಕೊಡಲು, ತಾವೇ ಖುದ್ದು ಚೆನ್ನಪಟ್ಟಣದಿಂದ ಸ್ಪರ್ಧಿಸಿ ಸಚಿವ ಕುಮಾರಸ್ವಾಮಿಗೆ ಶಾಕ್ ನೀಡುವ ಚಿಂತನೆಯಲ್ಲಿ ಡಿಕೆಶಿ ಇದ್ದಾರಂತೆ. ಚೆನ್ನಪಟ್ಟಣದಲ್ಲಿ ತಾನು ಗೆದ್ದು, ನಂತರದಲ್ಲಿ ಕನಕಪುರದಿಂದ ಡಿಕೆ ಸುರೇಶ್ರನ್ನ ಗೆಲ್ಲಿಸಿಕೊಳ್ಳುವ ಯೋಜನೆ ಡಿಕೆ ಶಿವಕುಮಾರ್ ಅವರದ್ದು ಎನ್ನಲಾಗ್ತಿದ್ದು, ಕಾಂಗ್ರೆಸ್ ಹೈಕಮ್ಯಾಂಡ್ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ರೆ ಚೆನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೆ ಪಕ್ಕಾ ಎನ್ನಲಾಗ್ತಿದೆ.
Post a comment
Log in to write reviews