ತುಮಕೂರು: ಲೋಕಸಭೆ ಚುನಾವಣೆ ಮುಗಿದ್ದಿದ್ದೇ ತಡ ಮತ್ತೆ ಮೂವರು ಡಿಸಿಎಂ ವಿಚಾರ ಮತ್ತೆ ಸದ್ದು ಮಾಡಿತ್ತಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಸರ್ಕಾರದಲ್ಲಿ ಮೂವರು ಡಿಸಿಎಂ ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ತಣ್ಣಗಾಗಿದ್ದ ಮೂವರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಚರ್ಚಾ ವಿಷಯವಾಗಿದೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ಇನ್ನಾದರೂ ಮೂವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಅದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬಂದು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುತ್ತಾರಾ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಆಗುವುದಿದ್ದರೆ ಬಹಳ ಹಿಂದೆಯೇ ಆಗಬೇಕಿತ್ತು. ಈಗ ಅಂತಹ ಸಾಧ್ಯತೆಗಳಿಲ್ಲ. ಡಿ.ಕೆ.ಶಿವಕುಮಾರ್ ಸಹ ಮುಖ್ಯಮಂತ್ರಿಯಾಗಲು ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
Post a comment
Log in to write reviews