ನೀವು ಇನ್ನೂ ಕೂಡ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ವಾ ಹಾಗಾದ್ರೆ ನೀವು ಆದಷ್ಟು ಬೇಗ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲೇಬೇಕು. ಯಾಕಂದ್ರೆ HSRP ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಇನ್ನೇನು ಕೇವಲ 6 ದಿನಗಳಲ್ಲಿ ಕೊನೆಗೊಳ್ಳಲಿದೆ. ಹೌದು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಈ ಗಡುವು ಜೂನ್ 12ಕ್ಕೆ ಕೊನೆಗೊಳ್ಳಲಿದೆ. ಒಂದು ವೇಳೆ ನೀವು HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ ಅಂದರೆ ಜೂನ್ 12 ನಂತರ ಸಾರಿಗೆ ಇಲಾಖೆ ನಿಮಗೆ ದಂಡ ವಿಧಿಸಲಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ರಿಜಿಸ್ಟರ್ ಆದ ವಾಹನಗಳು HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ. ನೀವು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳೋದಕ್ಕೆ ಮೊದಲು ಇಲ್ಲಿ ಕೆಳಗೆ ತೋರಿಸಿದ ಜಾಲತಾಣಕ್ಕೆ ಭೇಟಿ ನೀಡಬೇಕು. ಬಳಿಕ Book HSRP ಕ್ಲಿಕ್ ಮಾಡಬೇಕು. ನಂತರ ನಿಮ್ಮ ವಾಹನ ಮಾಡೆಲ್ ಅನ್ನು ಆಯ್ಕೆ ಮಾಡಬೇಕು. ಬಳಿಕ ಎಲ್ಲಾ ಮಾಹಿತಿಯನ್ನು ತುಂಬಬೇಕು. ನಂತರ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿಕೊಂಡು ಆನ್‌ಲೈನ್ ಮೂಲಕ ಹಣ ಪಾವತಿ ಮಾಡಿ. ಬಳಿಕ 0ಅವರು ಕೊಟ್ಟ ದಿನಾಂಕದಂದು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ.
ನೀವು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
Post a comment
Log in to write reviews