Samayanews.

Samayanews.

2024-12-24 12:43:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

DPL 2024: ಫೈನಲ್ನಲ್ಲಿ 3 ರನ್ಗಳಿಂದ ಗೆದ್ದು ಬೀಗಿದ ಈಸ್ಟ್ ಡೆಲ್ಲಿ ರೈಡರ್ಸ್

DPL: ಡೆಲ್ಲಿ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಪುರುಷರ ಫೈನಲ್ ಪಂದ್ಯದಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಚಾಂಪಿಯನ್ಸ್ ಪಟ್ಟ ಅಲಂಕರಿಸಿದ್ದರೆ, ಮಹಿಳಾ ಡಿಪಿಎಲ್​ನಲ್ಲಿ ನಾರ್ಥ್ ಡೆಲ್ಲಿ ಸ್ಟ್ರೈಕರ್ಸ್ ತಂಡವು ಚೊಚ್ಚಲ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಆದರೆ ಈ ಎರಡು ಫೈನಲ್​ಗಳಲ್ಲೂ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡ ಸೋಲನುಭವಿಸಿ ನಿರಾಸೆ ಅನುಭವಿಸಿದೆ.

ಡೆಲ್ಲಿ ಪ್ರೀಮಿಯರ ಲೀಗ್ನ ಫೈನಲ್ ಪಂದ್ಯದಲ್ಲಿ 3 ರನ್​ಗಳ ರೋಚಕ ಜಯ ಸಾಧಿಸಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಸೌತ್ ಡೆಲ್ಲಿ ಸೂಪರ್ ​ಸ್ಟಾರ್ಸ್ ಹಾಗೂ ಈಸ್ಟ್ ಡೆಲ್ಲಿ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಈಸ್ಟ್ ಡೆಲ್ಲಿ ರೈಡರ್ಸ್ ತಂಡದ ನಾಯಕ ಹಿಮ್ಮತ್ ಸಿಂಗ್ ಬ್ಯಾಟಿಂಗ್ ಆಯ್ದುಕೊಂಡರು. ಇದಾಗ್ಯೂ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಅನೂಜ್ ರಾವತ್ ಕೇವಲ 10 ರನ್​ಗಳಿಸಿ ಔಟಾದರೆ, ಸುಜಲ್ ಸಿಂಗ್ 5 ರನ್​ಗೆ ಇನಿಂಗ್ಸ್ ಅಂತ್ಯಗೊಳಿಸಿದರು. ಆ ಬಳಿಕ ಬಂದ ನಾಯಕ ಹಿಮ್ಮತ್ ಸಿಂಗ್ ಕಲೆಹಾಕಿದ್ದು ಕೇವಲ 20 ರನ್​ಗಳು ಮಾತ್ರ. ಆದರೆ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಯಾಂಕ್ ರಾವತ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

39 ಎಸೆತಗಳನ್ನು ಎದುರಿಸಿದ ಮಯಾಂಕ್ ರಾವತ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 78 ರನ್ ಚಚ್ಚಿದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 183 ರನ್​ ಕಲೆಹಾಕಿತು.

ಈ ಸವಾಲಿನ ಗುರಿ ಬೆನ್ನತ್ತಿದ ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಓಪನರ್​ಗಳಾದ ಕನ್ವರ್ ಭಿಧೂರಿ (22) ಹಾಗೂ ಪ್ರಿಯಾಂಶ್ ಆರ್ಯ (6) ಬೇಗನೆ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಆಯುಷ್ ಬದೋನಿ 7 ರನ್​ಗಳಿಸಿ ಔಟಾದರು.

ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಸುಮಿತ್ ಮಾಥುರ್ 42 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಇದಾಗ್ಯೂ ಅಂತಿಮ 5 ಓವರ್​ಗಳಲ್ಲಿ ಸೌತ್ ಡೆಲ್ಲಿ ಸೂಪರ್ ​ಸ್ಟಾರ್ಸ್ ತಂಡಕ್ಕೆ 66 ರನ್​ಗಳ ಅವಶ್ಯಕತೆಯಿತ್ತು.

ಕೊನೆಯ ಓವರ್​ಗಳ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ತೆಜಸ್ವಿ ದಹಿಯಾ ಸೌತ್ ಡೆಲ್ಲಿ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಕೇವಲ 39 ಎಸೆತಗಳನ್ನು ಎದುರಿಸಿದ ದಹಿಯಾ 69 ರನ್ ಬಾರಿಸಿ 19ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 19 ರನ್​ಗಳು ಬೇಕಿತ್ತು.

ರೋನಕ್ ವಘೆಲಾ ಅವರ ಅಂತಿಮ ಓವರ್​ನಲ್ಲಿ ದಿಘ್ವೇಶ್ ಠಾಠಿ ಒಂದು ಸಿಕ್ಸ್ ಹಾಗೂ 2 ಫೋರ್​ಗಳನ್ನು ಬಾರಿಸಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಕೊನೆಯ ಎರಡು ಎಸೆತಗಳಲ್ಲಿ 4 ರನ್​ಗಳಿಸಲು ದಿಘ್ವೇಶ್ ವಿಫಲರಾದರು. ಈ ಮೂಲಕ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿ ಚೊಚ್ಚಲ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

img
Author

Post a comment

No Reviews