Samayanews.

Samayanews.

2024-12-24 12:42:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಹಲವೆಡೆ ಮುಂದುವರೆದ ಒಣಹವೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.

ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಮೈಸೂರು, ಮಂಡ್ಯ, ಹಾಸನ, ವಿಜಯನಗರ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಆಗುಂಬೆ, ಚಾಮರಾಜನಗರ, ಕಾರವಾರ, ಕುಂದಾಪುರ, ಎಂಎಂ ಹಿಲ್ಸ್​, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು ಹಾಗೂ ಕೋಲಾರದಲ್ಲಿ ಮಳೆಯಾಗಿದೆ ಎಂದು ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೊಡ ಚದುರಿದ್ದು, ಬಿಸಿಲು ಇದೆ. ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇರಲಿದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ಹಾಗೂ 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ಹಾಗೂ 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

img
Author

Post a comment

No Reviews