ಕೇರಳ: ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಶನಿವಾರ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ. ನಾಲ್ಕು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 3.0ರಷ್ಟು ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತ್ರಿಶೂರ್ ಜಿಲ್ಲಾಡಳಿತ ತಿಳಿಸಿದೆ.
ಇದರ ಜೊತೆಗೆ ಕುನ್ನಂಕುಲಂ, ಎರುಮಪ್ಪೆಟ್ಟಿ ಹಾಗೂ ಪಝಂಜಿ ಪ್ರಾಂತ್ಯಗಳು ಹಾಗೂ ಪಾಲಕ್ಕಾಡ್ ಜಿಲ್ಲೆಯ ಭಾಗಗಳಲ್ಲಿ ನಡುಕದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಮತ್ತಷ್ಟು ಅಧ್ಯಯನ ನಡೆಸಲು ರಾಜ್ಯ ಭೌಗೋಳಿಕ ಇಲಾಖೆ ಭೂಕಂಪ ಸಂಭವಿಸಿದ ಪ್ರಾಂತ್ಯಗಳಿಗೆ ಧಾವಿಸಿದ್ದಾರೆ ಎಂದು ಹೇಳಲಾಗಿದೆ.
Post a comment
Log in to write reviews