ಬೆಂಗಳೂರು: ಸರ್ಕಾರದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ವಾರದೊಳಗೆ ಕಡ್ಡಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ ಕಚೇರಿಯಿಂದ ನೀಡಿರುವ ಗೂಗಲ್ ಫಾರ್ಮ್ನಲ್ಲಿ ಮಾಹಿತಿ ಭರ್ತಿ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಹೊರಡಿಸಿದ್ದ ಆದೇಶದನ್ವಯ 25,007 ಶಾಲೆಗಳ ಪೈಕಿ 15,170 ಶಾಲೆಗಳು ವಾಟ್ಸ್ ಆ್ಯಪ್ ಗ್ರೂಪ್ ರಚಿಸಿಕೊಂಡಿವೆ. ಈಗಾಗಲೇ ಸಂಘ ರಚಿಸಿಕೊಂಡಿರುವ ಶಾಲೆಗಳು ಗ್ರೂಪ್ ಆರಂಭಿಸಿ ಸದಸ್ಯರ ಸಂಖ್ಯೆ ಹೆಚ್ಚಿಸಿಕೊಳ್ಳಬೇಕು. ಸಂಘ ಸ್ಥಾಪಿಸದ ಶಾಲೆಗಳು, ಮೇ 30ರಿಂದ ಮುಂದಿನ ಒಂದು ವಾರದೊಳಗೆ ಕಡ್ಡಾಯವಾಗಿ ಸಂಘ ಸ್ಥಾಪಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ಹೇಳಿದೆ.
Post a comment
Log in to write reviews