ಬೆಂಗಳೂರು: ಕಂಗನಾ ರಣಾವತ್ ಅವರು ತಮ್ಮ ನಿರ್ದೇಶನದ ʻಎಮರ್ಜೆನ್ಸಿʼ ಸಿನಿಮಾ ಟ್ರೈಲರ್ ಬಿಡುಗಡೆಗೊಂಡಿದೆ. . ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದ್ದು, ರಾಜಕೀಯದ ಕಾರಣದಿಂದ ಈ ಸಿನಿಮಾ ಒಂದಷ್ಟು ವಿವಾದಗಳನ್ನು ಹುಟ್ಟುಹಾಕುವ ಸಾಧ್ಯತೆ ಕೂಡ ಇದೆ. ಈ ಸಿನಿಮಾದಲ್ಲಿನ ನಟನೆಗೆ ಕಂಗನಾ ರಣಾವತ್ ಅವರಿಗೆ ಖಂಡಿತಾ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ.
ಅಂತಿಮವಾಗಿ ಸೆಪ್ಟೆಂಬರ್ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್ ಖೇರ್, ಶ್ರೇಯಸ್ ತಲ್ಪಡೆ, ಮಿಲಿಂದ್ ಸೋಮನ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಈ ವರ್ಷ ನವೆಂಬರ್ 24ರಂದು ಎಮರ್ಜೆನ್ಸಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು.
ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಮೊದಲು ಜೂನ್ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ಕಂಗನಾ ʻಎಮರ್ಜೆನ್ಸಿʼ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದರು. ಇದಾದ ಬಳಿಕ 2023ರ ನವೆಂಬರ್ 24ರಂದು ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಮತ್ತೆ ಸಿನಿಮಾ ಬಿಡುಗಡೆಯಾಗುತ್ತಿಲ್ಲ ಎಂದು ಘೋಷಿಸಿದರು.
ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ರಿತೇಶ್ ಶಾ ಕಥೆ ಬರೆದಿದ್ದು, ಈ ಹಿಂದೆ ಅವರು ಕಂಗನಾ ಅವರ ಕೊನೆಯ ಚಿತ್ರ ಧಾಕಡ್ ಅನ್ನು ಸಹ ಬರೆದಿದ್ದಾರೆ. ಆದರೆ ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಗಳಿಕೆ ಕಂಡಿರಲಿಲ್ಲ. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ.
Post a comment
Log in to write reviews