ಹುಬ್ಬಳ್ಳಿ : ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಮನೆಗಳನ್ನು ಕಳೆದು ಕೊಂಡಿದ್ದಾರೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ ಮಖ್ಯಮಂತ್ರಿ ಹಾಗು ಸಂಬಂಧಿತ ಸಚಿವರು ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕಿತ್ತು ಆದರೆ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಕುಮಾರಸ್ವಾಮಿ, ಮಳೆ ಅನಾಹುತದಿಂದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿದು ಏಳಕ್ಕೂ ಹೆಚ್ಚು ಜನ ಪ್ರಾಣ ಕಳೆದು ಕೊಂಡಿದ್ದಾರೆ. ಆದರೆ ಇದುವರೆಗೆ ಸಿಎಂ ಹಾಗೂ ಯಾವ ಸಚಿವರು ಅಲ್ಲಿಗೆ ಭೇಟಿ ಅಲ್ಲಿನ ಪರಿಸ್ಥಿತಿ ವಿಚಾರಿಸಿಲ್ಲ ನಾನು ಮೂರು ದಿನಗಳ ಹಿಂದೆಯೇ ಅಲ್ಲಿಗೆ ಭೇಟಿ ಕೊಡಲು ಯೋಚಿಸಿದ್ದೆ. ಆದರೆ ದೆಹಲಿಯಲ್ಲಿ ಇಲಾಖೆಯ ನಿಗದಿತ ಕಾರ್ಯಕ್ರಮದ ನಿಮಿತ್ತ ಬರಲಾಗಲಿಲ್ಲ. ಇಂದು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಮಾಡುತ್ತಿದೇನೆ. ಭಾನುವಾರ ಸಕಲೇಶಪುರಕ್ಕೆ ಭೇಟಿ ಕೊಡುತ್ತಿದ್ದು, ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸುವೆ ಎಂದರು.
Post a comment
Log in to write reviews