ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇಂದು (ಆಗಸ್ಟ್ 8) ಬೆಳಿಗ್ಗೆ ನಿಧನರಾಗಿದ್ದಾರೆ. ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.20ಕ್ಕೆ ನಿಧನರಾದರು ಎಂದು ಕುಟುಂಬ ತಿಳಿಸಿದೆ ಎನ್ನಲಾಗಿದೆ. ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು.
ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರನ್ನು ಆಗಾಗ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಕಳೆದ ವರ್ಷ, ಬುದ್ಧದೇವ್ ಭಟ್ಟಾಚಾರ್ಯ ಅವರು ನ್ಯುಮೋನಿಯಾಕ್ಕೆ ತುತ್ತಾಗಿದ್ದರು. ಬುದ್ಧದೇವ್, ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದ (ಸಿಪಿಐಎಂ) ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿಯಾದ ಪಾಲಿಟ್‌ಬ್ಯೂರೊದ ಮಾಜಿ ಸದಸ್ಯರಾಗಿದ್ದರು. ಜ್ಯೋತಿ ಬಸು ಬಳಿಕ ಬುದ್ಧದೇವ್ ಭಟ್ಟಾಚಾರ್ಯ ಅವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
Post a comment
Log in to write reviews