ಶಿವಮೊಗ್ಗ: ರಾಜ್ಯದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಹಾಗು ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಸಂಘಟನೆ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಭಾಗಿಯಾಗಿದ್ದಾರೆ. ಪ್ರತಿಭಟನೆ ಕುರಿತು ಸುಧೀರ್ಘ ಭಾಷಣವನ್ನು ಮಾಡಿದ್ದಾರೆ. ಇದಾದನಂತರ ಸಭೆಯಿಂದ ತೆರಳುವ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಹತ್ತಿರದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ.
Post a comment
Log in to write reviews