ಹಾವೇರಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಬೇಡಿಕೆಯು ಹೆಚ್ಚಾಗಿದೆ. ಕಳೆದ ವರ್ಷ ಹಾವೇರಿ ಜಿಲ್ಲೆಯ ರೈತರು ಮಳೆ ಇಲ್ಲದೆ ತೀವ್ರ ಬರಗಾಲದಿಂದ ಬೇಸತ್ತು ಹೋಗಿದ್ದರು. ಆದರೆ ಈಗ ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಬೀಜಕ್ಕಾಗಿ ರೈತರು ಕ್ಯೂ ನಿಂತು ಖರೀದಿ ಮಾಡುತ್ತಿದ್ದಾರೆ. ಈ ಗದ್ದಲದ ನಡುವೆಯು ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುತ್ತಿದೆ. ಹೆಚ್ಚಿನ ಕೌಂಟರ್ ಓಪನ್ ಮಾಡಿ ಬಿತ್ತನೆ ಬೀಜವನ್ನು ವಿತರಣೆ ಮಾಡಲು ರೈತರು ಆಗ್ರಹಿಸಿದ್ದಾರೆ.
Post a comment
Log in to write reviews