ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಧಾರವಾಡ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಚುನಾವಣಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಸ್ವಾಮೀಜಿ ಭಾಷಣ ಮಾಡಿದ್ದರು. ಆ ವೇಳೆ ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಆರೋಪದಡಿ ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
Post a comment
Log in to write reviews