ರಾಮನಗರ: ಕಂದಾಯ ಭವನಕ್ಕೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ವಿರುದ್ಧ ರಾಮನಗರದ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿದ್ದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ರಾಮನಗರ ಕಂದಾಯ ಭವನದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಕಂದಾಯ ಭವನದ ಸಹಾಕರ ಇಲಾಖೆಯ ನಿರ್ಬಂಧಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾಗಿದ್ದಕ್ಕೆ, ಪೊಲೀಸ್ ಸಿಬ್ಬಂಧಿ ಮತ್ತು ಪ್ರತಿಭಟನಾಕಾರ ನಡುವೆ ತೀವ್ರ ವಾಗ್ವಾದ ನಡೆದು ಪರಿಸ್ಥಿತಿ ಕೈಮೀರಿ ಹೋಗಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ತಳ್ಳಾಟ-ನೂಕಾಟ ಸಂಭವಿಸಿತು. ಮುತ್ತಿಗೆ ಹಾಕಿದ ವೇಳೆ ಕಚೇರಿಗೆ ಹಾನಿ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಂದೂಡಿಕೆ ಮಾಡಿದ್ದಾರೆ. ಅಲ್ಲದೆ ಎರಡು ಬಾರಿ ಚುನಾವಣೆ ನಿಗಧಿಯಾಗಿದ್ದರೂ ಅಧಿಕಾರಿಗಳು ಚುನಾವಣೆ ನಡೆಸಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು.
Post a comment
Log in to write reviews