ಛತ್ತೀಸ್ಗಢದ ಬಿಜಾಪುರದಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಜಿಲ್ಲೆಯ ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿಂಗೇಲೂರು ಸಿಆರ್ಪಿಎಫ್ ಶಿಬಿರದಿಂದ ಭದ್ರತಾ ಸಿಬ್ಬಂದಿ ನೆಲಬಾಂಬ್ ತೆಗೆಯಲು ಹೊರಟಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಭದ್ರತಾ ಸಿಬ್ಬಂದಿ ಐಇಡಿಗೆ ಸಂಪರ್ಕಗೊಂಡಿರುವ ತಂತಿಯನ್ನು ಪತ್ತೆ ಮಾಡಿದ್ದು, ಅವರು ಐಇಡಿಗಳನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ವಿಲೇವಾರಿ ಮಾಡಲು ಪ್ರಾರಂಭಿಸಿದರು. ಸ್ಫೋಟದ ನಂತರ ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ರವಾನಿಸಲಾಗಿದೆ. ಐವರು ಅಪಾಯದಿಂದ ಪಾರಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿಯವರೆಗೆ 12 ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಗಂಗಲೂರು ಪ್ರದೇಶದಲ್ಲಿ ಗುಂಡಿನ ಚಕಮಕಿ ಕೊನೆಗೊಂಡಿದೆ. ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು. ಯಶಸ್ವಿ ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳನ್ನು ಅವರು ಅಭಿನಂದಿಸಿದ್ದಾರೆ.
ಈ ಹಿಂದೆ ಏಪ್ರಿಲ್ 16 ರಂದು, ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 29 ನಕ್ಸಲೀಯರು ಕೊಲ್ಲಲ್ಪಟ್ಟರು, ಅದೇ ರೀತಿ, ಏಪ್ರಿಲ್ 30 ರಂದು, ಕಂಕೇರ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳೊಂದಿಗಿನ ಮತ್ತೊಂದು ಎನ್ಕೌಂಟರ್ನಲ್ಲಿ ಹತ್ತು ನಕ್ಸಲೀಯರು ಹತರಾಗಿದ್ದರು.
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಈ ವರ್ಷದ ಮಾರ್ಚ್ನಲ್ಲಿ ಭದ್ರತಾ ಸಿಬ್ಬಂದಿಯೊಂದಿಗಿನ ಮತ್ತೊಂದು ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದರು. ಈ ನಕ್ಸಲೀಯರನ್ನು ಎನ್ಕೌಂಟರ್ ಮಾಡಿದ ನಂತರ ಪಡೆಗಳು ಭಾರೀ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದುಗುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಂಡಿವೆ.
ಮೃತ ನಕ್ಸಲರನ್ನು ವರ್ಗೀಶ್, ಮಗ್ತು, ಕುರ್ಸಾಂಗ್ ರಾಜು ಮತ್ತು ಕುಡಿಮೆಟ್ಟ ವೆಂಕಟೇಶ್ ಎಂದು ಗುರುತಿಸಲಾಗಿದೆ. ವರ್ಗೀಶ್ ಮತ್ತು ಮಗ್ತು ವಿವಿಧ ನಕ್ಸಲ್ ಸಮಿತಿಗಳ ಕಾರ್ಯದರ್ಶಿಗಳಾಗಿದ್ದರೆ, ಕುರ್ಸಾಂಗ್ ರಾಜು ಮತ್ತು ಕುಡಿಮೆಟ್ಟ ವೆಂಕಟೇಶ್ ಪ್ಲಟೂನ್ ಸದಸ್ಯರಾಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ವಿವರಗಳನ್ನು ಹಂಚಿಕೊಂಡಿದ್ದಾರೆ.
Post a comment
Log in to write reviews