Samayanews.

Samayanews.

2024-12-24 12:30:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ಗೆ ಬೆಂಕಿ

ಮಂಡ್ಯ :ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಫ್ಲೆಕ್ಸ್ ಗಳನ್ನ ಸುಟ್ಟುಹಾಕಿದ್ದಾರೆ. ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಆಗಸ್ಟ್.08 ರಂದು ಘಟನೆ ನಡೆದಿದೆ.

ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ನಲ್ಲಿದ್ದ ಫ್ಲೆಕ್ಸ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರನ್ನ ಸ್ವಾಗತಿಸಲು ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್‌ಗಳಲ್ಲಿ ಪ್ರೀತಂ ಫೋಟೋ ಹಾಕಿದ್ದಕ್ಕೆ ಬೆಂಕಿ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ಪಾದಯಾತ್ರೆ ವೇಳೆಯೂ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಮತ್ತೊಂದೆಡೆ ಪ್ರೀತಂ ಪರವಾಗಿ ಬೆಂಬಲಿಗರು ಘೋಷಣೆ ಕೂಗಿದ್ದರು. ಇದರಿಂದ ಕೈಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಹೋಗಿತ್ತು. ಇದೀಗ ಮಾಜಿ ಶಾಸಕ ಪ್ರೀತಂ ಭಾವಚಿತ್ರವಿದ್ದ ಫ್ಲೆಕ್ಸ್‌ಗಳಿಗೆ ಬೆಂಕಿ ಇಡಲಾಗಿದೆ.

img
Author

Post a comment

No Reviews