Samayanews.

Samayanews.

2024-11-15 08:12:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿಶ್ವದಲ್ಲೇ ಮೊದಲ ಬಾರಿಗೆ ಮೂರು ವಿಭಿನ್ನ ಕಾಯಿಲೆಗೆ ಏಕಕಾಲದಲ್ಲಿ ಚಿಕಿತ್ಸೆ ಫಲಕಾರಿ..!

ಬೆಂಗಳೂರು: ವಿಶ್ವದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲಿ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನೀಡುವುದರಲ್ಲಿ ಫೋರ್ಟಿಸ್‌ ಆಸ್ಪತ್ರೆಯ ವೈದ್ಯಕೀಯ ತಂಡ ಯಶಸ್ವಿಯಾಗಿದೆ.
ಕನ್ನಿಂಗ್‌ಹ್ಯಾಮ್‌ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿದೆ. ಇದು ವಿಶ್ವದಲ್ಲೇ ಮೊದಲ ಪ್ರಕರಣವಾಗಿದೆ. 
ಫೋರ್ಟಿಸ್ ಆಸ್ಪತ್ರೆಯ ಹೃದಯತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ. 
ಈ ಕುರಿತು ಮಾತನಾಡಿದ ಡಾ. ವಿವೇಕ್‌ ಜವಳಿ, 44 ವರ್ಷದ ಕೊಪ್ಪರಂ ಎಂಬ ವ್ಯಕ್ತಿಯು ಹೃದ್ರೋಗ ಸಮಸ್ಯೆಯನ್ನು ಹೊಂದಿದ್ದರು. ಇದಕ್ಕೆ ಚಿಕಿತ್ಸೆ ಪಡೆಯಲು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರಿಗೆ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡುವ ಅವಶ್ಯಕತೆ ಇತ್ತು. ರೋಗಿಯು ತಾವು ಮೊದಲಿನಿಂದಲೂ ಹೊಟ್ಟೆ ನೋವು ಅನುಭವಿಸುತ್ತಿರುವ ಬಗ್ಗೆಯೂ ನಮಗೆ ತಿಳಿಸಿದರು, ಇದಕ್ಕೆ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದೆವು. ಈ ವೇಳೆ ಅವರಿಗೆ ಪಿತ್ತಕೋಶದಲ್ಲಿ ಕಲ್ಲು ಇರುವುದು ಕಂಡು ಬಂತು. ಹೀಗಾಗಿ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕರುಳಿನ ಕ್ಯಾನ್ಸರ್‌ ಇರುವುದು ಸಹ ಪತ್ತೆಯಾಯಿತು. ಕರುಳಿನ ಕ್ಯಾನ್ಸರ್‌ ಬಹುಪಾಲು ದೊಡ್ಡಮಟ್ಟದಲ್ಲಿಯೇ ಅವರಿಗೆ ಹಾನಿ ಮಾಡುತ್ತಿತ್ತು. ಹೀಗಾಗಿ ಅವರಿಗೆ ಹೃದಯ ಬೈಪಾಸ್‌ ಸರ್ಜರಿಯ ಜೊತೆಗೆ ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಯೂ ಹೆಚ್ಚು ಅನಿವಾರ್ಯವಾಗಿತ್ತು. ಆದರೆ, ಹೃದಯದ ಬೈಪಾಸ್‌ ಸರ್ಜರಿ ಬಳಿಕ 3 ತಿಂಗಳು ಯಾವುದೇ ಚಿಕಿತ್ಸೆಗೆ ಒಳಪಡುವುದು ಹೆಚ್ಚು ಅಪಾಯಕಾರಿ. ಆದರೆ, ಮೂರು ತಿಂಗಳವರೆಗೂ ಕರುಳಿನ ಕ್ಯಾನ್ಸರ್‌ನನ್ನು ಹಾಗೇ ಬಿಡಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಈ ವ್ಯಕ್ತಿಗೆ ಏಕಕಾಲದಲ್ಲೇ ಹೃದಯದ ಬೈಪಾಸ್‌ ಸರ್ಜರಿ, ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಹಾಗೂ ಪಿತ್ತಕೋಶದಲ್ಲಿ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯನ್ನು ನಡೆಸಲು ಅವರ ಕುಟುಂಬದವರ ಒಪ್ಪಿಗೆ ಪಡೆದುಕೊಂಡೆವು.
ಮೊದಲಿಗೆ ಆಫ್-ಪಂಪ್ ಕರೋನರಿ ಆರ್ಟರಿ ಬೈಪಾಸ್ ನ ವಿಶೇಷ ಶಸ್ತ್ರಚಿಕಿತ್ಸಾ ತಂತ್ರದ ಮೂಲಕ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿಗೆ ನಡೆಸಿದೆವು. ಈ ಅವಧಿಯಲ್ಲೇ ಬಾರಿಯಾಟ್ರಿಕ್ ಸರ್ಜನ್‌ ಡಾ. ಜಿ. ಐ. ಗಣೇಶ್ ಶೆಣೈ ಅವರು, ಲ್ಯಾಪರೊಸ್ಕೋಪಿಕ್ ತಂತ್ರಜ್ಞಾನ ಬಳಸಿಕೊಂಡು, ಲ್ಯಾಪರೊಸ್ಕೋಪಿಕ್ ಎಕ್ಸ್ಟೆಂಡೆಡ್ ರೈಟ್ ಹೆಮಿಕೊಲೆಕ್ಟಮಿ  ಅನ್ನು ಕ್ಯಾನ್ಸರ್‌ನ ಕರುಳಿನ ಭಾಗವನ್ನು ತೆಗೆದುಹಾಕಿದರು, ಜೊತೆಗೆ, ಪಿತ್ತಕೋಶದ ಕಲ್ಲುಗಳನ್ನು ಸಹ ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ  ಮೂಲಕ ತೆಗೆದು ನಡೆಸಲಾಯಿತು. ರೋಗಿಯು ಶಸ್ತ್ರಚಿಕಿತ್ಸೆಯಾದ 15 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ವಿವರಿಸಿದರು.
 

img
Author

Post a comment

No Reviews