ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಬಹಳ ಮೌಲ್ಯಯುತವಾಗಿದೆ. ಹಾಗಾಗಿ ಮತದಾನ ಹಕ್ಕನ್ನು ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.
ನಮ್ಮ ಒಂದು ಮತ ದೇಶದ ಅಭಿವೃದ್ಧಿಯನ್ನು ನಿರ್ಧರಿಸುತ್ತದೆ. ಆದರೆ, ಇಂದಿನ ದಿನಗಳಲ್ಲಿ ಮತದಾನ ಬಗ್ಗೆ ಬಹಳಷ್ಟು ಜನ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಅದರಲ್ಲೂ ವಿದ್ಯಾವಂತರು ಕೂಡ ಮತದಾನ ಹಕ್ಕಿನ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳು ಮತದಾನ ಪ್ರಮಾಣ ಹೆಚ್ಚಿಸಲು ಹಲವಾರು ಪ್ರಯತ್ನ ಮಾಡುತ್ತಾರೆ.
ಅದರಂತೆ ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರ ಮತಗಟ್ಟೆಯಲ್ಲಿ ಲಕ್ಕಿ ಡ್ರಾ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಲಕ್ಕಿ ಡ್ರಾದಲ್ಲಿ ವಿಜೇತರಿಗೆ ಡೈಮಂಡ್ ರಿಂಗ್, ಫ್ರಿಡ್ಜ್ ಹಾಗೂ ಟಿವಿ ಸೇರಿದಂತೆ ವಿವಿಧ ಬಹುಮಾನಗಳನ್ನು ನೀಡಲಾಗುವುದು. ಮತದಾನದ ಎರಡು ಗಂಟೆಗಳಿಗೊಮ್ಮೆ ಲಕ್ಕಿ ಡ್ರಾ ಮಾಡಿ ವಿಜೇತರ ಹೆಸರು ಘೋಷಿಸಲಾಗುತ್ತದೆ.
ಮತದಾರರಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಭೋಪಾಲ್ ಜಿಲ್ಲಾಧಿಕಾರಿ ಕೌಸಲೇಂದ್ರ ವಿಕ್ರಮ್ ಸಿಂಗ್ ಹೇಳಿದ್ದಾರೆ.
Post a comment
Log in to write reviews