ಬೆಂಗಳೂರು: ಪೋಕ್ಸೋ ಕೇಸ್ನ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಇಂದು ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.12ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು. ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ.17ರಂದು ವಿಚಾರಣೆಗೆ ಹಾಜರಾಗುವುದಾಗಿ ತನಿಖಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇಂದು ಬಿಎಸ್ವೈ ವಿಚಾರಣೆಗೆ ಹಾಜರಾಗಿದ್ದು, ಡಿವೈಎಸ್ಪಿ ಪುನೀತ್ ತನಿಖೆ ನಡೆಸುತ್ತಿದ್ದು, ವಿಚಾರಣೆ ನಂತರ ಸತ್ಯಾಸತ್ಯತೆ ಏನು ಎಂಬುವುದು ತಿಳಿಯಲಿದೆ.
Post a comment
Log in to write reviews