ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ತಾಯಿಯ ಆರೋಗ್ಯ ವಿಚಾರಿಸಲು ಉಪಚುನಾವಣಾ ಸಂಬಂಧ ಸಭೆಗಳನ್ನು ಕೈಬಿಟ್ಟು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಅಲ್ಲದೆ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ಕುಟುಂಬ ಸದಸ್ಯರು ಆಸ್ಪತ್ರೆಗೆ ಬಂದಿದ್ದಾರೆ.
ಜೆಡಿಎಸ್ ಸಮನ್ವಯ ಸಮಿತಿಯ ಸಭೆಯನ್ನು ನಿನ್ನೆ ರಾತ್ರಿ ಕರೆಯಲಾಗಿತ್ತು. ಆದ್ರೆ ತಾಯಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಖಾಸಗಿ ಹೋಟೆಲ್ ನಲ್ಲಿ ನಿಗದಿಯಾಗಿದ್ದ ಸಭೆ ರದ್ದಾಗಿದೆ. ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಇವತ್ತು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕಾರಿಣಿ ಸಭೆ ನಡೆದಿದ್ದು, ಇನ್ನೂ ಸಭೆಯಲ್ಲಿ ಸಂಸದರು, ಶಾಸಕರು, ಮಾಜಿ ಸಂಸದರು, ಶಾಸಕರು ಹಾಗೂ ಪದಾದಿಕಾರಿಗಳು ಭಾಗಿಯಾಗಿದ್ದರು.
Post a comment
Log in to write reviews