Samayanews.

Samayanews.

2024-12-24 12:47:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

ಬೆಂಗಳೂರು: ಶಿರೂರು ವಯನಾಡು ಭೂಕುಸಿತ  ಬೆನ್ನಲ್ಲೇ ಎಚ್ಚೆತ್ತಕೊಂಡ ರಾಜ್ಯ ಸರ್ಕಾರ, ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ.

ಈ ಸಂಬಂಧ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ನೆರೆ ರಾಜ್ಯವಾದ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

 

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಹಾಗೂ 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಅರಣ್ಯ ಒತ್ತುವರಿ ತೆರವಿಗೆ ಕ್ರಮ

ಈ ಬಗ್ಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ , ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

img
Author

Post a comment

No Reviews