ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯ ಮತ್ತು ಬೆಂಗಳೂರಿನ ಹಿತಾಸಕ್ತಿಗೆ ಪೂರಕವಾಗಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ಮಾಡಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ನಡೆದ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬೆಂಗಳೂರು ಹೊರತಾಗಿ ಬೇರೆ ಕಡೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶದ ಬಗ್ಗೆ ಸಚಿವರು ಹೇಳಿದ್ದಾರೆ. ತುಮಕೂರು ಮತ್ತು ಚಿತ್ರದುರ್ಗದ ಮಧ್ಯೆ ನಿರ್ಮಾಣ ಮಾಡುವ ಯೋಜನೆ ಇದೆಯಾ ಎಂದು ಬಿಜೆಪಿ ಸದಸ್ಯ ನವೀನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ರೀತಿಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ, ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ ಮಾಡುವ ಪ್ಲಾನ್ ಇದೆ. ನಮಗೆ 2033 ರವರೆಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವಕಾಶ ಇದೆ. ಆ ನಂತರ ನಾವು ಬೇರೆ ಕಡೆ ವಿಮಾನ ನಿಲ್ದಾಣ ಮಾಡಬಹುದು'' ಎಂದು ಹೇಳಿದರು
ಈಗಿನಿಂದಲೇ ಪ್ರಸ್ತಾಪ ಮಾಡುತ್ತಿದ್ದೇವೆ. ಏಳೆಂಟು ಜಾಗ ಗುರುತಿಸಿದ್ದೇವೆ. ಏರ್ ಪೋರ್ಟ್ ಜಾಗ ಮೆರಿಟ್ ಮೇಲೆ ಮಾಡುತ್ತೇವೆ. ಸೂಕ್ತ ಮಾನದಂಡದ ಮೇಲೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಗುರಿ ಇದೆ. ಲಾಜಿಸ್ಟಿಕ್, ಪ್ಯಾಸೆಂಜರ್ ಕನೆಕ್ಟಿವಿಟಿ ನೋಡಿ ಬೆಂಗಳೂರಿಗೆ ಮತ್ತು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿಯೇ ಮಾಡಲಾಗುತ್ತದೆ. ರಾಜ್ಯದ ಹಿತಾಸಕ್ತಿಗೆ ಪೂರಕವಾಗಿ ಮಾಡಲಾಗುತ್ತದೆ'' ಎಂದು ತಿಳಿಸಿದರು.
ಚಿತ್ರದುರ್ಗದಲ್ಲಿ ಜಿಲ್ಲಾ ವಿಮಾನ ನಿಲ್ದಾಣ ಮಾಡೋಣ. ಆದರೆ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಅತಿ ಅಗತ್ಯ ಮತ್ತು ಸೂಕ್ತ ಸ್ಥಳವಾಗಿದೆ. ಆದರೆ, ಚಿತ್ರದುರ್ಗಕ್ಕೆ ಕೈಗಾರಿಕೆ ಸ್ಥಾಪಿಸುವ ಪ್ರಯತ್ನ ಮಾಡುತ್ತೇವೆ'' ಎಂದು ಹೇಳಿದರು.
Post a comment
Log in to write reviews