ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು.
ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದೃಷ್ಟಿಕೋನದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ, ಈ ಯೋಜನೆ ಜಾರಿಯಿಂದ ಪಕ್ಷಕ್ಕೆ ಲಾಭವಾಗಬಹುದು ಎಂದರು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಒಂದಷ್ಟು ಹಣಕಾಸಿನ ತೊಂದರೆಯಾಗುತ್ತದೆ ಎಂಬುದು ಎಲ್ಲರಿಗೆ ಗೊತ್ತಿರುವ ವಿಚಾರ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುವಾಗ ಮರುಹೊಂದಾಣಿಕೆ ಮಾಡಬೇಕಾಗುತ್ತದೆ. ಇದನ್ನು ನಾವು ಮಾಡುತ್ತೇವೆ. ಅದು ನಮಗೆ ಗೊತ್ತಿದೆ. ಹಸಿದ ಹೊಟ್ಟೆಯಲ್ಲಿರುವ ಜನರಿಗೆ ಬೇರೆ ಯಾವ ಯೋಜನೆಗಳನ್ನು ಜಾರಿಗೆ ತಂದರೂ ಪ್ರಯೋಜನ ಆಗುವುದಿಲ್ಲ ಎಂದರು.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನುಗಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ವಿಚಾರದ ಕುರಿತು ಭಿನ್ನಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ಹೇಳಿಕೆ ಸಚಿವರು ಯೋಜನೆಗಳನ್ನುನಿಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
Post a comment
Log in to write reviews