ಹಾಥರಸ್ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 120ಕ್ಕೆ ಏರಿಕೆ, 50 ಜನರ ಸ್ಥಿತಿ ಗಂಭೀರ
ಉತ್ತರ ಪ್ರದೇಶ : ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 120 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್‌ಪುರ್ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಸತ್ಸಂಗ ಪ್ರಾರ್ಥನೆಯಲ್ಲಿ ಹೆಚ್ಚಿನ ಜನ ಭಾಗವಹಿಸಿದ್ರಿಂದ ಕಾಲ್ತುಳಿತಕ್ಕೆ ಸಿಲುಕಿ ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಧಾರ್ಮಿಕ ಕಾರ್ಯಕ್ರಮ ಮುಗಿದಾಗ ಎಲ್ಲರೂ ಹೊರಗೆ ಹೋಗುವ ಅವಸರದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಸಂತ್ರಸ್ತರೊಬ್ಬರು ಹೇಳಿದ್ದಾರೆ. ಧಾರ್ಮಿಕ ಬೋದಕ್ ಬಾಬ ಅವ್ರ ಸಭೆ ನಡೆದಿತ್ತು. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನುಯಾಯಿಗಳು ದವಡಾಯಿಸಿದ್ದರು. ಯಾವುದೇ ಸರಿಯಾದ ದಾರಿಯಿಲ್ಲದೇ, ಎಲ್ಲರೂ ಒಬ್ಬರ ಮೇಲೆ ಬಿದ್ದು ಕಾಲ್ತುಳಿತ ನಡೆಯಿತು ಎಂದು ತಿಳಿದುಬಂದಿದ್ದೆ. ಸದ್ಯ ಸ್ಥಳಕ್ಕೆ ಪೊಲೀಸರು, ಅಲಿಘಡ್ ಕಮಿಷನರ್, ಡಿಸಿ ಭೇಟಿ ನೀಡಿದ್ದಾರೆ. ಟ್ವೀಟ್ ಮೂಲಕ UP ಸಿಎಂ ಯೋಗಿ ಆದಿತ್ಯಾನಾಥ್ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ ಧನ ಘೋಷಣೆ ಮಾಡಿದ್ದಾರೆ.
Post a comment
Log in to write reviews