Samayanews.

Samayanews.

2024-12-23 10:57:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಈ ಬಾರಿ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ ಎಂದ ಹೆಚ್‌ ಡಿ ದೇವೇಗೌಡ್ರು

ಕಾರಣಾಂತರಗಳಿಂದ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಮೇ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ನನ್ನ ಅಭಿಮಾನಿಗಳು ಹಾಗೂ ಜೆಡಿಎಸ್‌‍ ಪಕ್ಷದ ಕಾಯಕರ್ತರು ಇದ್ದಲ್ಲಿಯೇ ಶುಭ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌‍-ಬಿಜೆಪಿಯ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.

img
Author

Post a comment

No Reviews