ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ಮಾಡಿದ್ದರು ಎಂಬ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಅರ್ಜಿ ಸಲ್ಲಿಸಿದ್ದರು. ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ನ್ಯಾಯಾಲಯ, ಶನಿವಾರ ಸಂಜೆ 5.30ರೊಳಗೆ ಎಸ್‌ಐಟಿ ಮುಂದೆ ಹಾಜರಾಗುವಂತೆ ಗಡುವು ನೀಡಿ ಆದೇಶವನ್ನು ಕಾಯ್ದಿರಿಸಿತ್ತು. ಆದರೆ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಲಿಲ್ಲ. ಗಡುವು ಮುಗಿಯುತ್ತಿದ್ದಂತೆ ಕೋರ್ಟ್ ಹಾಲ್‌ಗೆ ಬಂದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ಪ್ರಕಟಿಸಿದರು.
ಮೈಸೂರು ಜಿಲ್ಲೆಯ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಎಚ್.ಡಿ. ರೇವಣ್ಣ ಗುರುವಾರದಿಂದಲೇ ತಲೆಮರೆಸಿಕೊಂಡಿದ್ದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರ ಮನೆಯಲ್ಲಿ ರೇವಣ್ಣ ಆಶ್ರಯ ಪಡೆದುಕೊಂಡಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎಸ್‌ಐಟಿ ಅಧಿಕಾರಿಗಳ ತಂಡ, ಮನೆಗೆ ತೆರಳಿ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.
Tags:
- hd revanna taken into custody
- sit officials
- hd revanna arrest by sit
- sit arrested hd revanna
- prajwal revanna vicitims
- sit arrest hd revanna news
- hd revanna arrested by sit
- hd revanna today news
- hd revanna latest news
- sit investigates prajwal revanna case
- hd revanna arrest
- hd revanna
- fir against prajwal revanna and hd revanna
- prajwal revanna today news
- hd revanna arrested
Post a comment
Log in to write reviews