Samayanews.

Samayanews.

2024-12-23 11:22:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಕಾರವಾರ, ಹಳಿಯಾಳ, ಮಧುಗಿರಿ, ಶಿರಾಲಿ, ಸೇಡಬಾಳ, ಕೋಟ, ಉಡುಪಿ, ನಿಪ್ಪಾಣಿ, ಸೈದಾಪುರ, ಸಂಕೇಶ್ವರ, ಧಾರವಾಡ, ರಾಯಭಾಗ, ಚಿಕ್ಕೋಡಿ, ಕೊಪ್ಪ, ಕುಂದಾಪುರ, ಮಂಕಿ, ಗೋಕರ್ಣ, ಝಲ್ಕಿ, ಔರಾದ್, ಕುಕನೂರು, ನರಗುಂದ, ಇಳಕಲ್​ನಲ್ಲಿ ಮಳೆಯಾಗಿದೆ.

ರಬಕವಿ, ಹಿಡಕಲ್, ಹುಕ್ಕೇರಿ, ಹೊನ್ನಾವರ, ಅಂಕೋಲಾ, ಕಲಘಟಗಿ, ಬೆಳಗಾವಿ, ಶಿರಹಟ್ಟಿ, ನೆಲೋಗಿ, ಮಹಾಲಿಂಗಪುರ, ಮುಂಡಗೋಡು, ಮಂಗಳೂರು, ಜೇವರ್ಗಿ, ಮೂಲ್ಕಿ, ಸಿಂದಗಿ, ಆಲಮಟ್ಟಿ, ಗದಗ, ಗಬ್ಬೂರು, ಹುಂಚದಕಟ್ಟೆ, ಕಳಸ, ಕೆಆರ್​ನಗರ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 31.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

img
Author

Post a comment

No Reviews