ಬೆಂಗಳೂರು: ಸಿಲಿಲಿಕಾನ್ ಸಿಟಿಯಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನ ಚಿತ್ರಣವೇ ಬದಲಾಗಿದೆ. ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ರಾಜಾಜಿನಗರ, ಬೆಂಗಳೂರಿನ ಮೆಜೆಸ್ಟಿಕ್,ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಎಲೆಕ್ಟ್ರಾನ್ ಸಿಟಿ, ಸಿಲ್ಕ್ ಬೋರ್ಡ್, ಯಲಹಂಕ, ಹೆಬ್ಬಾಳ್ ಇನ್ನೂ ಹಲವು ಕಡೆ ಭಾರೀ ಮಳೆಯಾಗುತ್ತಿದೆ.
ಮಳೆಯ ಅಬ್ಬರದಿಂದ ಬೆಂಗಳೂರು ಜನತೆ ತತ್ತರಿಸಿ ಹೋಗಿದ್ದಾರೆ. ಕೆಲಸಕ್ಕೆ ಹೋಗುವವರು, ಶಾಲಾ- ಕಾಲೇಜಿಗೆ ಹೋಗುವವರು ಮಳೆಯಲ್ಲೇ ನೆನೆದುಕೊಂಡು ಹೋಗುವಂತಹ ಪರಿಸ್ಥಿತಿ ಎದುರಾಗಿದೆ.
ಇದಲ್ಲದೆ ಬೆಂಗಳೂರಿನ ಹಲವೆಡೆ ಮರಗಳು ಧರೆಗುಳಿದಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿವೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಸಾಲು ಸಾಲು ಅವಾಂತಗಳು ಸೃಷ್ಟಿಯಾಗಿದ್ದು, ಬರೋಬ್ಬರಿ 2 ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಆಗಿದೆ. ಮಳೆಯ ಅಬ್ಬರದಿಂದ ಸಿಟಿ ಮಂದಿ ತತ್ತರಿಸಿ ಹೋಗಿದ್ದಾರೆ.
Post a comment
Log in to write reviews