ಬೆಂಗಳೂರು : ರಾಜ್ಯದ ವಿವಿಧೆಡೆ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗು ಐದು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಳಗಾವಿ , ಧಾರವಾಡ, ಹಾವೇರಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ರೆಡ್ ಅಲರ್ಟ್ ಘೋಷಿಸಿದ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಯೆಲ್ಲೊ ಅಲರ್ಟ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಕರಾವಳಿ ಉದ್ದಕ್ಕೂ ಚಂಡಮಾರುತ ಮೇಲುಗೈ ಸಾಧಿಸುವ ಸಾಧ್ಯತೆಯಿದ್ದು, ಗಂಟೆಗೆ 35ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರವಹಿಸುವಂತೆ ಹವಮಾನ ಇಲಾಖೆ ಸೂಚಿಸಿದೆ.
Post a comment
Log in to write reviews