Samayanews.

Samayanews.

2024-12-23 11:46:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದ್ದು, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಳಿದ ಉಡುಪಿ, ದಕ್ಷಿಣ ಕನ್ನಡ ಸುತ್ತಮುತ್ತಲ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಸುತ್ತಮುತ್ತ ಚದುರಿದಂತೆ ಮಳೆ ಸುರಿಯಬಹುದು.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆ ಮತ್ತು ನಿರಂತರ ಗಾಳಿಯ ವೇಗ 30-40ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಇರಲಿದೆ.

img
Author

Post a comment

No Reviews