ಬೆಂಗಳೂರು: ಆಗಸ್ಟ್ 15 ಸ್ವಾತಂತ್ರ್ಯೋತ್ಸವದ ದಿನವೇ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಇನ್ನು ಉತ್ತರ ಕನ್ನಡ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಅದೇ ರೀತಿ ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆ.17ರವರೆಗೆ ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಹವಾಮಾನ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ
ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಹೀಗಾಗಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
Post a comment
Log in to write reviews