Samayanews.

Samayanews.

2024-12-24 12:29:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜಧಾನಿ ಬೆಂಗಳೂರಿನಲ್ಲಿ 4 ದಿನ ಬಿರುಸಾದ ಮಳೆ: ಯೆಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ 

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರ ಜೀವನ ಅಸ್ಥವ್ಯಸ್ಥಗೊಂಡಿದೆ. ತಡರಾತ್ರಿ ಸುರಿದ ಭಾರೀ ಮಳೆಗೆ ಮತ್ತಷ್ಟು ಅವಾಂತರಗಳನ್ನ ಸೃಷ್ಟಿಸಿದೆ. ಯಲಹಂಕದ ಕೋಗಿಲು ಕ್ರಾಸ್ ಬಳಿ ಇರುವ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಮುಂದೆ ಪ್ರವಾಹ ಸದೃಶ ವಾತಾವರಣ ನಿರ್ಮಾಣವಾಗಿದ್ದು, ಸುಮಾರು 2.500 ಜನರಿರುವ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್ ಸುತ್ತಲೂ ನೀರು ತುಂಬಿಕೊಂಡಿದ್ದು, NDRF  ತಂಡ ಬೋಟ್ ಬಳಸಿ ನಿವಾಸಿಗಳಿಗೆ ನೆರವು ಒದಗಿಸುತ್ತಿದೆ‌.
ಯಲಹಂಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ರಸ್ತೆಗಳು ಜಲಾವೃತಗೊಂಡಿದೆ. ಶಾಲಾ ಮಕ್ಕಳಿಗೆ ಶಾಲಾ ಬಸ್‌ಗಳು ಬರಲಾರದೆ, ನೀರಿನ‌ ಮಧ್ಯೆಯೇ ಮಕ್ಕಳು ನಡೆದುಕೊಂಡು  ಹೋಗುವ ಅನಿರ್ವಾತೆಯುಂಟಾಗಿದೆ. ಚಿಕ್ಕಬಾಣಾವರದ ದ್ವಾರಕಾ ನಗರದ ಜನರಿಗೆ ಪ್ರವಾಹದ ಭೀತಿ ಎದುರಾಗಿದ್ದು, ರಾತ್ರಿ ಸುರಿದ ಮಳೆ ಪರಿಣಾಮ ರಾಜ ಕಾಲುವೆ ನೀರು ಏರಿಯಾಗೆ ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. 30ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದೆ. 
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಮಳೆಯಾಗುತ್ತಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 22ರಿಂದ 24ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲೂ ಮಳೆಯಾಗಲಿದ್ದು, ದಾವಣಗೆರೆ, ಕುಣಿಗಲ್, ಬನವಾಸಿ, ಜಯಪುರ, ಶ್ರೀರಂಗಪಟ್ಟಣ, ತರೀಕೆರೆ, ಹೊನ್ನಾಳಿ, ಕಾರವಾರ, ಶಿವಮೊಗ್ಗ, ಚಿತ್ರದುರ್ಗ, ಆನವಟ್ಟಿ, ಕಿರವತ್ತಿ, ಕದ್ರಾ, ಕುಂದಾಪುರ, ಮುಂಡಗೋಡು, ಹಿರೇಕೆರೂರು,  ಹೊನ್ನಾವರ, ಹುಂಚದಕಟ್ಟೆ, ಶ್ರವಣಬೆಳಗೊಳ, ನಾಯಕನಹಟ್ಟಿ, ಎನ್​ಆರ್​ಪುರ, ತರೀಕೆರೆ, ಗೇರುಸೊಪ್ಪ, ಗೋಕರ್ಣದಲ್ಲಿ ಉತ್ತಮ ಮಳೆಯಾಗಿದೆ.
ಬೆಂಗಳೂರಿನಲ್ಲಿ ಹೆಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,  20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

img
Author

Post a comment

No Reviews