ಬೆಂಗಳೂರು: ಕರ್ನಾಟಕದಲ್ಲಿ ಕೆಲವು ಕಡೆ ಭಾರೀ ಮಳೆಯಾಗುತ್ತಿದ್ದು, ಅಕ್ಟೋಬರ್ 20 ರವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದ್ದು, ಅಕ್ಟೋಬರ್ 20ರವರೆಗೆ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯನಗರ, ಮೈಸೂರು, ಕೊಡಗು, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Post a comment
Log in to write reviews