Samayanews.

Samayanews.

2024-12-24 12:36:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ಟೋಬರ್‌ 17ರ ವರೆಗೆ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಅಕ್ಟೋಬರ್ 17ರವರೆಗೆ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ C.S.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ 17ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಎರಡು ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ ಪ್ರದೇಶದಲ್ಲೂ ವಾಯುಭಾರ ಕುಸಿತ ಸಾಧ್ಯತೆ ಇದೆ. 
ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ,  ಕೋಲಾರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಧಾರವಾಡ ಹಾಗೂ ಹಾವೇರಿ ಈ ಜಿಲ್ಲೆಗಳ ಹಲವೆಡೆ ಅಕ್ಟೋಬರ್ 17ರ ವರೆಗೆ ಭಾರಿ ಮಳೆ ಸಾಧ್ಯತೆ ಇದ್ದು, ಅಕ್ಟೋಬರ್ 17ರ ವರೆಗೆ ಯಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 

img
Author

Post a comment

No Reviews