Samayanews.

Samayanews.

2024-12-23 11:31:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿಮಳೆ

ಬೆಂಗಳೂರು : ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯಲ್ಲೋಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಮಿಡಿಗೇಶಿ, ಭಾಲ್ಕಿ, ಔರಾದ್, ಗಂಗಾವತಿ, ತೊಂಡೇಭಾವಿ, ಗದಗ, ಸೇಡಬಾಳ, ಗೌರಿಬಿದನೂರು, ಹಳಿಯಾಳ, ಮಂಠಾಳ, ಹುಮನಾಬಾದ್, ಅಣ್ಣಿಗೆರೆ, ಬೀದರ್, ಜೇವರ್ಗಿ, ಚಿತ್ರದುರ್ಗ, ಸುಳ್ಯ, ಕಲಬುರಗಿ, ವಿಜಯಪುರ, ಕುರ್ಡಿ, ನೆಲೋಗಿ, ಹಗರಿಬೊಮ್ಮನ ಹಳ್ಳಿಯಲ್ಲಿ ಸಧಾರಣ ಮಳೆಯಾಗಿದೆ.

ಬೆಂಗಳೂರಿನಲ್ಲಿ ಭಾನುವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ​ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

 

img
Author

Post a comment

No Reviews