ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗಳು ಒತ್ತಡ ಹೇರಿದ ಆರೋಪದ ಮೇಲೆ ಇಡಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕೋರ್ಟ್ ತಡೆ ನೀಡಿದೆ. ಆಗಸ್ಟ್ 21ಕ್ಕೆ ವಿಚಾರಣೆ ಮುಂದೂಡಿ ನ್ಯಾ. M.ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು.
ದೂರಿನ ಮೇರೆಗೆ ED ಅಧಿಕಾರಿಗಳಾದ ಮಿತ್ತಲ್, ಮುರುಳಿ ಕಣ್ಣನ್ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ FIR ದಾಖಲಾಗಿತ್ತು. ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು. ಇದೀಗ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ಗೆ ತಡೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣ ದಾಖಲಾದ ಒಂದೇ ದಿನಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಈ ಮೂಲಕ ಹೈಕೋರ್ಟ್ನಲ್ಲಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.
Post a comment
Log in to write reviews