Samayanews.

Samayanews.

2024-11-15 08:12:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತಂಗಿಗೆ ಟಾಟಾ ಬೈ ಬೈ ಎಂದ ಅಣ್ಣ ಕುಮಾರ್‌ ಬಂಗಾರಪ್ಪ.

ಪ್ರತಿಷ್ಠೆಯ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ. ಬಿ.ವೈ ರಾಘವೇಂದ್ರ ಗೀತಾಶಿವರಾಜ್‌ ಕುಮಾರ್‌ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ.  ಈ ಕ್ಷೇತ್ರ ಕುಮಾರ್‌ ಬಂಗಾರಪ್ಪ ಅವರಿಗೂ ಅಷ್ಟೇ ಪ್ರತಿಷ್ಠೆಯ ಕಣವಾಗಿತ್ತು. ಬಿಜೆಪಿ ಕಾಂಗ್ರೆಸ್‌ ಕದನಕ್ಕಿಂತ ಬಂಗಾರಪ್ಪ ಕುಟುಂಬದ ಕದನವಾಗಿತ್ತು. ಸ್ವತಃ ತಮ್ಮ ತಂಗಿಯ ವಿರುದ್ದ ಬಿಜೆಪಿ ಅಭ್ಯರ್ಥಿಯನ್ನು  ಗೆಲ್ಲಿಸಲು ಕುಮಾರ್‌ ಬಂಗಾರಪ್ಪ ಟೊಂಕ ಕಟ್ಟಿ ನಿಂತಿದ್ದರು. ಈ ಗೆಲುವು ರಾಘವೇಂದ್ರ ಅವರಿಗೆ ಎಷ್ಟು ಖುಷಿ ಕೊಟ್ಟಿದೆಯೋ ಅಷ್ಟೇ  ಖುಷಿ ಕುಮಾರ ಬಂಗಾರಪ್ಪನವರಿಗೂ ಕೊಟ್ಟಿದೆ. ಈ ಗೆಲುವಿನಿಂದಾಗಿ ಬಿ.ವೈ ರಾಘವೆಂದ್ರ ಅವರಿಗೆ ಅಭಿನಂದನೆ ಸಲ್ಲಿಸುವುದದರೊಂದಿಗೆ ತಮ್ಮ ಮನದಾಳದ ಮಾತನ್ನು ಫೆಸ್‌ ಬುಕ್‌ ಖಾತೆಯ ಮೂಲಕ ಕುಮಾರ್‌ ಬಂಗಾರಪ್ಪ ಹಂಚಿಕೊಂಡಿದ್ದಾರೆ.

ಕರ್ನಾಟಕ ಕಂಡ ಧೀಮಂತ ರಾಜಕಾರಣಿ ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತಬಂದುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡನುಡಿ ಸಂಸ್ಕೃತಿಗಳ ರಕ್ಷಾ ಧೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿಯ ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು.

ಇವರ ಆಡಳಿತ ವೈಖರಿಯು ಅನುಕರಣೀ ಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು. ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ,ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ. ಇಂತಹ ಒಬ್ಬ ಧಿರೋದ್ಧಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆ ಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ!

ಮೇಲಾಗಿ ಕನ್ನಡದ ಕಣ್ಮಣಿ Dr. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು.

ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ.ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು, ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ,

ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ CM ಅವನನ್ನು ಸಂಪುಟ ದಿಂದ ವಜಾ ಮಾಡಬೇಕು.ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ.

ಅವನ ಭಾವ, ನನ್ನ ತಂಗಿಯ ಗಂಡ Dr. ಶಿವರಾಜಕುಮಾ‌ರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು.ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು.ಹೆದರಿಸುವ, ಬೆದರಿಸುವ, ಹುಷಾ‌ರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು ಎಂದು ಕುಮಾರ್‌ ಬಂಗಾರಪ್ಪ ಎಚ್ಚರಿಸಿದ್ದಾರೆ.

img
Author

Post a comment

No Reviews