ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅನುಕೂಲ ಪಡೆದು ಸಿದ್ದರಾಮಯ್ಯ ಸೈಟ್ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಎಂ ಆಗಿ ವಿಪಕ್ಷ ನಾಯಕರಾಗಿ ಅಧಿಕಾರ ಅನುಭವಿಸಿದ್ದಾರೆ. ಹೀಗಿದ್ದರೂ ಸಿದ್ದರಾಮಯ್ಯ ಅವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಹಿನ್ನಲೆ ಜು.12ರಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸಿಎಂ ರಾಜೀನಾಮೆಗೆ ಹಾಗೂ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಮುಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹೇಳಿದರು.
Post a comment
Log in to write reviews