ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಿದ್ರೆ ನೋಟಿಸ್ ಕೊಡ್ಬೇಕಾಗುತ್ತೆ : ಡಿಕೆಶಿ ಖಡಕ್ ವಾರ್ನಿಂಗ್
ಬೆಂಗಳೂರು : ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ದಿನಕ್ಕೊಂದು ಹೇಳಿಕೆ ನೀಡಿತ್ತಿರುವ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಸಿಎಂ, ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ಪಕ್ಷ ಕಟ್ಟಲು, ಅಧಿಕಾರಕ್ಕೆ ತರಲು ಬಹಳ ಕಷ್ಟಪಟ್ಟಿದ್ದೇವೆ. ನಿಮ್ಮ ಬಾಯಿಗೆ ಬೀಗ ಹಾಕಿ, ಯಾರೂ ಬಾಯಿಗೆ ಬಂದಂತೆ ಮಾತನಾಡಬೇಡಿ. ಹೀಗೆ ಮಾತ್ನಾಡ್ತಾ ಇದ್ರೆ ನೋಟಿಸ್ ಕೊಡ್ಬೇಕಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಕ್ಷದ ಶಾಸಕರು, ಸಚಿವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ನನಗೆ ಯಾರ ರೆಕಮಂಡೇಶನ್ ಬೇಡ. ಆಶೀರ್ವಾದ ಸಾಕು. ರಾಜಕಾರಣದ ಸುದ್ದಿಗೆ ನೀವು ತಲೆ ಹಾಕಬೇಡಿ ಎಂದು ಸ್ವಾಮೀಜಿಗಳಿಗೆ ಡಿಸಿಎಂ ಮನವಿ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತನಾಡಿದ್ದಾರೆ ಅಷ್ಟೇ. ರಾಜಕಾರಣದ ಸುದ್ದಿಗೆ ನೀವು ಬರಬೇಡಿ ಎಂದಿದ್ದಾರೆ.
ನಿನ್ನೆ ನಾವೆಲ್ಲ ಎಂಪಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಮುಕ್ತವಾಗಿ ಮಾತಾಡಿದ್ದೇವೆ. ರಾಜ್ಯದಲ್ಲಿ ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ನಾನು ಖರ್ಗೆ ಹಾಗೂ ಸಿದ್ದರಾಮಯ್ಯ ಕೂತು ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್ಎ ಕೂಡ ಮಾತಾಡುವ ಅವಶ್ಯಕತೆ ಇಲ್ಲ. ಎಐಸಿಸಿಯವರು, ನಾನೂ ವಿಧಿಯಿಲ್ಲದೇ, ಪಕ್ಷದ ಶಿಸ್ತು ಕಾಪಾಡಲು ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Post a comment
Log in to write reviews