ಸಚಿವರ ಹೇರ್ ಕಟಿಂಗ್‌ಗೆ ಹಣಕಾಸಿನ ಸಮಸ್ಯೆ ಇದ್ದರೆ, ಹಣ ಸಂಗ್ರಹಿಸಿ ಕೊಡುತ್ತೇವೆ : ಬಿ ವೈ ವಿಜಯೇಂದ್ರ
ರಾಜ್ಯದ ಶಿಕ್ಷಣ ಸಚಿವರಿಗೆ ಹೇರ್ ಕಟಿಂಗ್ ಗೆ ಹಣಕಾಸಿನ ಸಮಸ್ಯೆ ಇದ್ದರೆ, ಹಣ ಸಂಗ್ರಹಿಸಿ ಕೊಡಲು ಯುವ ಮೋರ್ಚಾದವರಿಗೆ ಹೇಳುತ್ತೇನೆ. ಶಿಕ್ಷಣ ಸಚಿವರು ಹೇಗಿರಬೇಕೆಂದರೆ, ಅವರು ಇತರರಿಗೆ ಮಾದರಿ ಆಗಿರಬೇಕು. ರಾಜ್ಯದ ಶಿಕ್ಷಣ ಸಚಿವರು ನನಗೆ ಸರಿಯಾಗಿ ಕನ್ನಡ ಬರುವುದಿಲ್ಲ ಎಂದು ಹೇಳುತ್ತಾರೆ. ಹಾಗೇ ಅವರು ಯಾವ ರೀತಿ ಅವಾಂತರಗಳನ್ನ ಮಾಡುತಿದ್ದಾರೆಂದು ರಾಜ್ಯದ ಜನರಿಗೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಗೆ ಹೆಚ್ಚಾಗಿ ಪ್ರೋತ್ಸಾಹ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಕಳೆದ ಅಕ್ಟೋಬರ್ ನಿಂದ 800 ಕೋಟಿಗೂ ಹೆಚ್ಚು ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ ಎಂದು ಟೀಕೆ ಮಾಡಿದರು. 187 ಕೋಟಿಗೂ ಹೆಚ್ಚು ಮೊತ್ತದ ಎಸ್ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಇಲಾಖೆ ಅಕೌಂಟೆಂಟ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂಭಂದ ಪಟ್ಟ ಇಲಾಖೆ ಸಚಿವರ ಮೌಖಿಕ ಆದೇಶದ ಮೇರೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟಿನಲ್ಲಿ ತಿಳಿಸಿದ್ದಾರೆ. ಆ ಸಚಿವರನ್ನು ತಮ್ಮ ಮಂತ್ರಿಮಂಡಲದಿಂದ ಕೈಬಿಡಬೇಕು. ಹೈಕೋರ್ಟ್ ನ್ಯಾಯಾಧೀಶರಿಂದ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಆಗ್ರಹಿಸಿದರು. ರಾಜ್ಯದ ಸಿಎಂ, ಡಿಸಿಎಂ ಕಳಕಳಿ ಪ್ರಾಮಾಣಿಕತೆ ಎಲ್ಲಿ ಹೋಗಿದೆ? ವಿಧಾನಸಭೆ ಚುನಾವಣೆ ವೇಳೆ ನಮ್ಮ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ, ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಿತಾಮಹರೆಂದು ಸಾಬೀತಾಗುತ್ತಿದೆ.
ಕರ್ನಾಟಕದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲಿ ನೋಡಿದರೂ ಕೊಲೆಗಳು ನಡೆಯುತ್ತಿವೆ. ಚನ್ನಗಿರಿ ಘಟನೆ ಪೊಲೀಸರಿಗೇ ಪೊಲೀಸರೇ ರಕ್ಷಣೆ ಕೊಡಬೇಕಾದ ಪರಿಸ್ಥಿತಿ ಸೃಷ್ಟಿ ಆಗಿದೆ. ಮಟ್ಕಾ ದಂಧೆ ಯಥೇಚ್ಛವಾಗಿ ರಾಜ್ಯಾದ್ಯಂತ ನಡೆದಿದೆ ಎಂದರು.
Post a comment
Log in to write reviews